ಬಸವಣ್ಣಾ, ನೀವು ಮತ್ರ್ಯಕ್ಕೆ ಬಂದು ನಿಂದಡೆಭಕ್ತಿಯ ಬೆಳವಿಗೆ ದೆಸೆದೆಸೆಗಲ್ಲಾ ಪಸರಿಸಿತ್ತಲ್ಲಾ !ಅಯ್ಯಾ, ಸ್ವರ್ಗ ಮತ್ರ್ಯ ಪಾತಾಳದೊಳಗೆಲ್ಲಾನಿಮ್ಮ ಭಕ್ತಿಯ ಬೆಳವಿಗೆಯ ಘನವನಾರು ಬಲ್ಲರು ?ಅಣ್ಣಾ, ಶಶಿಧರನಟ್ಟಿದ ಮಣಿಹ ಪೂರೈಸಿತ್ತೆಂದುನೀವು ಲಿಂಗೈಕ್ಯವಾದೊಡೆ, ನಿಮ್ಮೊಡನೆ ಭಕ್ತಿ ಹೋಯಿತ್ತಯ್ಯಾ.ನಿಮ್ಮೊಡನೆ ಅಸಂಖ್ಯಾತ ಮಹಾಗಣಂಗಳು ಹೋದರಣ್ಣಾ.ಮತ್ರ್ಯಲೋಕದ ಮಹಾಮನೆ ಶೂನ್ಯವಾಯಿತ್ತಲ್ಲಾ ಬಸವಣ್ಣಾ.ಎನ್ನನೊಯ್ಯದೆ ಹೋದೆಯಲ್ಲಾ ಪಂಚಪರುಷಮೂರ್ತಿ ಬಸವಣ್ಣಾ.ಬಸವಣ್ಣಪ್ರಿಯ ಚೆನ್ನಸಂಗಯ್ಯಂಗೆಪ್ರಾಣಲಿಂಗವಾಗಿ ಹೋದೆಯ ಸಂಗನಬಸವಣ್ಣಾ ?- ನಾಗಲಾಂಬಿಕೆ
0
April 10, 2022
Tags