ಆಸೆಯುಳ್ಳನ್ನಕ್ಕ ರೋಷ ಬಿಡದುಕಾಮವುಳ್ಳನ್ನಕ್ಕ ಕಳವಳ ಬಿಡದುಕಾಯಗುಣವುಳ್ಳನ್ನಕ್ಕ ಜೀವನ ಬುದ್ಧಿ ಬಿಡದು;ಭಾವವುಳ್ಳನ್ನಕ್ಕ ಬಯಕೆ ಸವೆಯದುzನಡೆಯುಳ್ಳನ್ನಕ್ಕ ನುಡಿಗೆಡದು.ಇವೆಲ್ಲವು ಮುಂದಾಗಿದ್ದು ಹಿಂದನರಿದೆನೆಂಬಸಂದೇಹಿಗಳಿರಾ, ನೀವು ಕೇಳಿರೋ.ನಮ್ಮ ಶರಣರು ಹಿಂದ ಹೇಗೆ ಅರಿದರೆಂದಡೆಆಸೆಯನಳಿದರು, ರೋಷವ ಹಿಂಗಿದರು,ಕಾಮನ ಸುಟ್ಟರು, ಕಳವಳವ ಹಿಂಗಿದರು,ಕಾಯಗುಣವಳಿದರು, ಜೀವನ ಬುದ್ಧಿಯ ಹಿಂಗಿದರು,ಭಾವವ ಬಯಲುಮಾಡಿದರು, ಬಯಕೆಯ ಸವೆದರು.ಹಿಂದನರಿದು ಮುಂದೆ ಲಿಂಗವೆ ಗೂಡಾದ ಶರಣರ ಈ ಸಂದೇಹಿಗಳೆತ್ತ ಬಲ್ಲರು, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?-ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ

Tags

Post a Comment

0 Comments
* Please Don't Spam Here. All the Comments are Reviewed by Admin.