ಅಂತಾಯಿತ್ತಿಂತಾಯಿತ್ತೆಂತಾಯಿತ್ತೆನಬೇಡ,ಅನಂತನಿಂತಾತನೆಂದರಿಯಾ ಬಿಡಾಡಿ.ಕರೆದಡೆ ಓ ಎಂಬುದು ನಾದವೊ ಬಿಂದುವೊ ಪ್ರಾಣವೊಇದಾವುದು ? ಬಲ್ಲಡೆ ನೀ ಹೇಳಾ, ಬಿಡಾಡಿ.ನಾಲ್ಕು ವೇದ, ಹದಿನಾರು ಶಾಸ್ತ್ರ, ಹದಿನೆಂಟು ಪುರಾಣ, ಇಪ್ಪತ್ತೆಂಟಾಗಮಇದಪ್ರತಿ ಬಿಡಾಡಿ.ಶಬ್ದವೆ ಬ್ರಹ್ಮ, ಶಬ್ದವೆ ಸಿದ್ಧ, ಶಬ್ದವೆ ಶುದ್ಧ ಕಾಣಿರೆ, ಬಿಡಾಡಿ ?-ಬೊಂತಾದೇವಿ

Post a Comment

0 Comments
* Please Don't Spam Here. All the Comments are Reviewed by Admin.