ಕಂಗಳು ನುಂಗಿದ ಬಯಲವ, ಕರ್ಣ ಅವಗವಿಸಿದ ನಾದವ,ನಾಸಿಕದಲ್ಲಿ ನಷ್ಟವಾದ ಸುಗಂಧವ,ಜಿಹ್ವೆಯ ಕೊನೆಯಲ್ಲಿ ಅಳಿದ ರಸಾನ್ನವ,ಮುಟ್ಟಿನ ದೆಸೆಯಲ್ಲಿ ನಿಶ್ಚಯವಾದ ಮೃದು ಕಠಿಣಾದಿ,ಇಂತಿವೆಲ್ಲವೂ ನಿಜನೆಲೆಯಲ್ಲಿ ಅಚ್ಚೊತ್ತಿದಂತೆ ಐಕ್ಯವಾದ ಮತ್ತೆಅರ್ಪಿತವೆಂಬುದು ಹಿಂಚೋ, ಮುಂಚೋ ಎಂಬುದ ತಿಳಿದು,ಆ ಉಳುಮೆಯಲ್ಲಿ ಕಲೆದೋರದೆ ಅರ್ಪಿತ ನಷ್ಟವಾದುದು.ಕಮಠೇಶ್ವರಲಿಂಗವ ಕೂಡಿ ಕೂಡಿದೆನೆಂದುಎರಡಳಿದ, ಪ್ರಾಣಲಿಂಗ ಲಿಂಗಪ್ರಾಣವೆಂಬ ಸಂದೇಹವಳಿದ ಶರಣ.- ಬಾಲಸಂಗಣ್ಣ
test
May 24, 2022