ಹೆಣ್ಣ ಧ್ಯಾನಿಸಿ ನಿಮ್ಮ ಮರೆದೆನಯ್ಯಾ,ನಾನು ಮರೆದ ಕಾರಣ ನೀನೆನ್ನ ಮರೆದೆ.ನೀ ಮರೆದ ಕಾರಣ ಹೆಣ್ಣು ಸಾಧ್ಯವಾಗದು.ನಿನ್ನ ಮೋಹ ತಪ್ಪಿ ಕೆಟ್ಟೆನಯ್ಯಾ.ಹೊನ್ನು ಹೆಣ್ಣು ಮಣ್ಣು ಎಂಬ ಆಸೆಯೆನ್ನ ಘಾಸಿ ಮಾ[ಡೆ],ಕೆಟ್ಟೆ ಕೆಟ್ಟೆ ಶಿವಧೋ ಶಿವಧೋ ಮಹಾದೇವ.ಹೊನ್ನು ಹೆಣ್ಣು ಮಣ್ಣಿಗೆ ಕರ್ತನು ನೀನು.'ತೇನ ವಿನಾ ತೃಣಾಗ್ರಮಪಿ ನ ಚಲತಿ‹ಎಂಬುದನರಿದೂ, ಮದದಲ್ಲಿದ್ದು ಕೆಟ್ಟೆ.ಈ ಕೇಡಲ್ಲದೆ ಹಸಿವು ತೃಷೆ ವ್ಯಸನ ವಿಷಯಪಂಚೇಂದ್ರಿಯ ಷಡುವರ್ಗ ನೀನಾಗಿ ಕಾಡುತ್ತಿವೆ.ಕೆಟ್ಟೆ ಕೆಟ್ಟೆ ಶಿವಧೋ ಮಹಾದೇವ.ಹೊನ್ನು ಹೆಣ್ಣು ಮಣ್ಣಿನ ಆಶೆಯಿಂದ ಈ ಅವಸ್ಥೆಗೊಳಗಾದೆನು.ಇನ್ನಿವಕ್ಕಾಶೆಮಾಡೆನು, ನಿಮ್ಮ ಮರೆಯೆನು, ನಿಮ್ಮಾಣೆ.ಭಕ್ತವತ್ಸಲ, ಭಕ್ತದೇಹಿಕ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.-ಉರಿಲಿಂಗಪೆದ್ದಿ

Tags

Post a Comment

0 Comments
* Please Don't Spam Here. All the Comments are Reviewed by Admin.