ಬಸವಣ್ಣ ಮತ್ರ್ಯಲೋಕಕ್ಕೆ ಬಂದು ಮಹಾಮನೆಯ ಕಟ್ಟಿ,ಭಕ್ತಿಜ್ಞಾನವೆಂಬ ಜ್ಯೋತಿಯನೆತ್ತಿ ತೋರಲುಸುಜ್ಞಾನವೆಂಬ ಪ್ರಭೆ ಪಸರಿಸಿತಯ್ಯಾ ಜಗದೊಳಗೆ.ಬೆಳಗಿನೊಳು ತಿಳಿದು ನೋಡಿ ಹರೆದಿದ್ದ ಶಿವಗಣಂಗಳೆಲ್ಲ ನೆರೆದು ಕೂಡಿತಯ್ಯಾ.ಕೂಡಲಚೆನ್ನಸಂಗಮದೇವಾ ನಿಮ್ಮ ಶರಣ ಬಸವಣ್ಣನ ಕೃಪೆಯಿಂದಪ್ರಭುದೇವರ ನಿಜವನರಿದು ನಿಶ್ಚಿಂತರಾದರಯ್ಯಾ ಶಿವಗಣಂಗಳೆಲ್ಲರು-ಚೆನ್ನಬಸವಣ್ಣ

Tags

Post a Comment

0 Comments
* Please Don't Spam Here. All the Comments are Reviewed by Admin.