ವಿರಕ್ತನಾದ ಬಳಿಕ ವಿಷಯಕ್ಕೆ ದೂರನಾಗಿರಬೇಕು.ಒಣಗಿದ ಮರನ ವಾಯು ಅಪ್ಪಿದಂತಿರಬೇಕು.ಸಮುದ್ರದೊಳಗೆ ತರುಗಿರಿಗಳು ಮುಳುಗಿದಂತಿರಬೇಕು.ಮೂಗ ಕಂಡ ಕನಸಿನಂತಿರಬೇಕು.ಜಾಲಗಾರ ಕಂಡ ರತ್ನದಂತಿರಬಲ್ಲಡೆ, ವಿರಕ್ತನೆಂಬೆನು.ಹೀಂಗಲ್ಲದೆ ಅರುಹುಳ್ಳವರೆಂದು ತಮ್ಮ ಅಗಮ್ಯವ ಬೀರುವಅಜ್ಞಾನಿಯ ಭಕ್ತನೆಂದಡೆ, ಮಾಹೇಶ್ವರನೆಂದಡೆ, ಪ್ರಸಾದಿಯೆಂದಡೆ,ಪ್ರಾಣಲಿಂಗಿಯೆಂದಡೆ, ಶರಣನೆಂದಡೆ, ಐಕ್ಯನೆಂದಡೆ ಅಫ್ಸೋರನರಕ ತಪ್ಪದು ಕಾಣಾ, ಅಮುಗೇಶ್ವರಲಿಂಗವೆ.-ಅಮುಗೆ ರಾಯಮ್ಮ

Tags

Post a Comment

0 Comments
* Please Don't Spam Here. All the Comments are Reviewed by Admin.