ಭಕ್ತಿಯೆಂಬುದು ಬೇರು, ವಿರಕ್ತಿಯೆಂಬುದೆ ಮರ, ಫಲವೆಂಬುದೆ ಜ್ಞಾನ.ಪಕ್ವಕ್ಕೆ ಬಂದಿತ್ತೆಂಬಾಗಲೆ ಅವಧಿಜ್ಞಾನ.ತೊಟ್ಟು ಬಿಟ್ಟಲ್ಲಿಯೆ ಪರಮಜ್ಞಾನ.ಸವಿದಲ್ಲಿಯೆ ಅಂತರೀಯಜ್ಞಾನ.ಸುಖ ತನ್ಮಯವಾದಲ್ಲಿಯೆ ದಿವ್ಯಜ್ಞಾನ.ದಿವ್ಯ ತೇಜಸ್ಸು ಹಿಂಗದಲ್ಲಿಯೆ ಪರಿಪೂರ್ಣಜ್ಞಾನ.ಅದು ಮಹದೊಡಲೆಂಬುದಕ್ಕೆ ಎಡೆಯಿಲ್ಲ.ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವುಅಪ್ರಮಾಣಾದ ಕಾರಣ.-ಪ್ರಸಾದಿ ಭೋಗಣ್ಣ
0
May 17, 2022
Tags