ಬಸವಣ್ಣನ ಮನೆಯ ಮಗಳಾದ ಕಾರಣಭಕ್ತಿಪ್ರಸಾದವ ಕೊಟ್ಟನು.ಚೆನ್ನಬಸವಣ್ಣನ ತೊತ್ತಿನ ಮಗಳಾದ ಕಾರಣಒಕ್ಕಪ್ರಸಾದವ ಕೊಟ್ಟನು.ಪ್ರಭುದೇವರ ತೊತ್ತಿನ ತೊತ್ತಿನ ಮರಿದೊತ್ತಿನ ಮಗಳಾದ ಕಾರಣಜ್ಞಾನಪ್ರಸಾದವ ಕೊಟ್ಟನು.ಸಿದ್ಧರಾಮಯ್ಯನ ಶಿಶುಮಗಳಾದ ಕಾರಣಪ್ರಾಣಪ್ರಸಾದವ ಸಿದ್ಧಿಸಿಕೊಟ್ಟನು.ಮಡಿವಾಳಯ್ಯನ ಮನೆಯ ಮಗಳಾದ ಕಾರಣನಿರ್ಮಲಪ್ರಸಾದವ ನಿಶ್ಚೈಸಿಕೊಟ್ಟನು.ಇಂತೀ ಅಸಂಖ್ಯಾತ ಗಣಂಗಳೆಲ್ಲರುತಮ್ಮ ಕರುಣದ ಕಂದನೆಂದು ತಲೆದಡಹಿದ ಕಾರಣ ಚೆನ್ನಮಲ್ಲಿಕಾರ್ಜುನಯ್ಯನ ಶ್ರೀಪಾದಕ್ಕೆ ಯೋಗ್ಯಳಾದೆನು.- ಅಕ್ಕಮಹಾದೇವಿ
0
May 04, 2022
Tags