ಜ್ಯೋತಿ ಬೆಳಗುತಿದೆ ವಿಮಲ ಪರಂಜ್ಯೋತಿ ಬೆಳಗುತಿದೆಮಾತು ಮನಂಗಳಿಂದತ್ತತ್ತ ಮೀರಿದಸಾದತಿಶಯದ ನಿರುಪಾಧಿಕ ನಿರ್ಮಲಜ್ಯೋತಿ ಬೆಳಗುತಿದೆ ವಿಮಲ ಪರಂಜ್ಯೋತಿ ಬೆಳಗುತಿದೆಶಿವಧರ್ಮನಾಳವೆಂತೆಂಬ ಕಂಬದ ಮೇಲೆಸುವಿವೇಕ ಹೃದಯಾಬ್ಜ ಪಣತೆಯೊಳುಸವೆಯದ ಸದ್ಭಕ್ತಿ ರಸತೈಲ ತೀವಿದಪ್ರವಿಮಲ ಕಳೆಯೆಂಬ ಬತ್ತಿವಿಡಿದು ದಿವ್ಯಜ್ಯೋತಿ ಬೆಳಗುತಿದೆ ವಿಮಲ ಪರಂಜ್ಯೋತಿ ಬೆಳಗುತಿದೆಮುಸುಕಿದ ವಿಷಯ ಪತಂಗ ಬಿದ್ದುರುಳೆ ತಾಮಸಬುದ್ಧಿಯೆಂಬ ಕತ್ತಲೆಯಳಿಯೆಮಸಗಿ ಸುಜ್ಞಾನವೆಂತೆಂಬ ಮಹಾಪ್ರಭೆಪಸರಿಸಿ ಮಾಯಾಕಾಳಿಕೆ ಪೊರ್ದದನುಪಮಜ್ಯೋತಿ ಬೆಳಗುತಿದೆ ವಿಮಲ ಪರಂಜ್ಯೋತಿ ಬೆಳಗುತಿದೆಪ್ರಣವಾಕಾರದ ಗುಣ ಮೂರು ಮುಟ್ಟದಗಣನೆಗತೀತಾರ್ಥವೆನೆ ತೋರುವಅಣುಮಾತ್ರ ಚಲನೆಯಿಲ್ಲದ ಮೋಕ್ಷ ಚಿಂತಾಮಣಿಯೆನಿಸುವ ಶಂಭುಲಿಂಗವೆ ತಾನಾದಜ್ಯೋತಿ ಬೆಳಗುತಿದೆ ವಿಮಲ ಪರಂಜ್ಯೋತಿ ಬೆಳಗುತಿದೆಸಾಹಿತ್ಯ: ನಿಜಗುಣ ಶಿವಯೋಗಿಗಳು
0
August 18, 2022